ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡು ಬರುತ್ತಿದೆ – ಡಾ.ಪರಮೇಶ್ವರ
ಪ್ರಗತಿವಾಹಿನಿ ಸುದ್ದಿ, ತುಮಕೂರು
ತುಮಕೂರಿನ ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗಳ ನೇತೃತ್ವದಲ್ಲಿ ಕೆಲವೇ ಕ್ಷಣದಲ್ಲಿ ಸಭೆ ನಡೆಯಲಿದೆ.
ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಮಠಕ್ಕೆ ಬರುತ್ತಿದ್ದಾರೆ. ಬಂದ ನಂತರ ಉನ್ನತಮಟ್ಟದ ಸಭೆ ನಡೆಯಲಿದೆ.
ಈಗಾಗಲೆ ಗೃಹ ಸಚಿವ ಎಂ.ಬಿ.ಪಾಟೀಲ ಸಹ ಆಗಮಿಸಿದ್ದಾರೆ. ಉಪಮುಖ್ಯಮಂತ್ರಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗ್ಗೆಯೇ ಆಗಮಿಸಿದ್ದಾರೆ. ಮಠಕ್ಕೆ ಈಗಾಗಲೆ ಎಲ್ಇಡಿ ಪರದೆ ಇರುವ 10 ವಾಹನಗಳನ್ನು ತರಿಸಲಾಗಿದೆ. ಎಲ್ಲಿ ನೋಡಿದರೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಈ ಮಧ್ಯೆ, ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡು ಬರುತ್ತಿದೆ ಎಂದು ಇದೀಗ ಡಾ.ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಲಾಗುತ್ತಿದೆ. ಅವರೂ ಸಹ ಚಿಕಿತ್ಸೆಗೆ ಸಲಹೆ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಭಕ್ತರು ಸಹಕರಿಸಬೇಕು. ಆತಂಕಪಡುವ ಸ್ಥಿತಿ ಇಲ್ಲ. ಯಾರೂ ಬಂದು ತೊಂದರೆಕೊಡಬೇಡಿ. ತೊಂದರೆ ತೆಗೆದುಕೊಳ್ಳಬೇಡಿ ಎಂದು ಅವರು ವಿನಂತಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ