ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಮಂಡಿ ನೋವಿನಿಂದ ಬಳಲುತ್ತಿರುವ ದೇವೇಗೌಡ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆಯಂತೆ ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ದೇವೇಗೌಡರ ಆರೋಗ್ಯ ವಿಚಾರಿಸಲು ಹಲವಾರು ಗಣ್ಯರು, ಮಠಾಧೀಶರು ಸಹ ಆಗಮಿಸುತ್ತಿದ್ದಾರೆ.