ಪ್ರಗತಿವಾಹಿನಿ ಸುದ್ದಿ, ಧರ್ಮಸ್ಥಳ
ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರವಾಸವನ್ನು ಸ್ವಲ್ಪಕಾಲ ಮುಂದೂಡುವಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಎಲ್ಲೆಡೆಯಂತೆ ಧರ್ಮಸ್ಥಳದಲ್ಲೂ ನೀರಿನ ತೀವ್ರ ಅಭಾವ ಉಂಟಾಗಿದೆ. ನೇತ್ರಾವತಿ ನದಿಯಲ್ಲೂ ನಿರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಹಾಗಾಗಿ ಭಕ್ತರು ಬಂದರೆ ನೀರಿನ ಸಮಸ್ಯೆ ಉಂಟಾಗಬಹುದು. ಆದ್ದರಿಂದ ಪ್ರವಾಸವನ್ನು ಸ್ವಲ್ಪಕಾಲ ಮುಂದೂಡಬೇಕು ಎಂದು ಅವರು ವಿನಂತಿಸಿದ್ದಾರೆ.