ಪ್ರಗತಿವಾಹಿನಿ ಸುದ್ದಿ, ಧಾರವಾಡ
84ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಧಾರವಾಡದಲ್ಲಿ ಆರಂಭವಾಗಲಿದ್ದು, 3 ದಿನಗಳ ಕನ್ನಡ ಹಬ್ಬಕ್ಕೆ ಶಿಕ್ಷಣ ಕಾಶಿ ಸಜ್ಜುಗೊಂಡಿದೆ.
ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಸರ್ವಾಧ್ಯಕ್ಷತೆಯಲ್ಲಿ ಈ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸುವರು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಯಿಂದ ಸುಮಾರು ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.
ಸಮ್ಮೇಳನಕ್ಕಾಗಿ ಧಾರವಾಡ 3 ದಿನಗಳ ಹಿಂದೆಯೇ ಸಿಂಗಾರಗೊಂಡಿದೆ. ನಾಡಿನ ಸಾಹಿತ್ಯ ದಿಗ್ಗಜರು ಈಗಾಗಲೆ ಧಾರವಾಡದತ್ತ ಆಗಮಿಸುತ್ತಿದ್ದಾರೆ.
ಸಮ್ಮೇಳನದ ಕಾರ್ಯಕ್ರಮಗಳನ್ನು ಸಮಾನಾಂತರ ವೇದಿಕೆಯಲ್ಲಿ ನಡೆಸಲಾಗುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಗೋಷ್ಠಿಗಳು ಸಮಾನಾಂತರ ವೇದಿಕೆಯಲ್ಲಿ ನಡೆಯಲಿವೆ.
3 ದಿನಗಳ ಕಾರ್ಯಕ್ರಮದ ವಿವರವನ್ನೊಳಗೊಂಡಿರುವ ಆಮಂತ್ರಣ ಪತ್ರಿಕೆಯನ್ನು ಪ್ರಗತಿವಾಹಿನಿ ಓದುಗರಿಗಾಗಿ ಇಲ್ಲಿ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ