ಪ್ರಗತಿವಾಹಿನಿ ಸುದ್ದಿ, ಧಾರವಾಡ
ಖ್ಯಾತ ಸಾಹಿತಿ ದಿ.ಕೀರ್ತಿನಾಥ ಕುರ್ತಕೋಟಿ ಅವರ ಸೊಸೆ ನರ್ಮದಾ ಕುರ್ತಕೋಟಿ (54) ಸೋಮವಾರ ಮಧ್ಯಾಹ್ನ ನಿಧನರಾದರು.
ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರನ್ನು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್ ಕಾರ್ಯದರ್ಶಿ, ದಿಕ್ಕು ಸಾಮಾಜಿಕ ಸಂಸ್ಥೆಯ ಸ್ಥಾಪಕಿಯಾಗಿದ್ದ ಅವರು, ಅಪಾರ ಬಂಧು ಬಳಗ ಅಗಲಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ದೇಸಾಯಿ ಕಾಲನಿಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.