Latest

*ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು ಕೃಷಿ ಕಾಯ್ದೆ ವಾಪಸ್, ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಬಸ್ತವಾಡ ಕ್ಯಾಂಪ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ತಡೆದಿದ್ದಾರೆ.

ಇದೇ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ರೈತ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ.

Home add -Advt

 

*BREAKING NEWS: ವಿಧಾನಸಭಾ ಚುನಾವಣೆ; JDS ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*

https://pragati.taskdun.com/vidhanasabha-election-2023jdscandidate-1st-listh-d-kumaraswamy/

Related Articles

Back to top button