Latest

ನಾಳೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆ: ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬಣ್ಣ ಆಡುವಾಗ ವಿದ್ಯಾರ್ಥಿಗಳ ಬಗ್ಗೆ ಎಚ್ಚರವಿರಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

೨೦೧೯ರ ಎಸ್.ಎಸ್. ಎಲ್.ಸಿ ಪರೀಕ್ಷೆಗಳು ಸೋಮವಾರ ಆರಂಭವಾಗಲಿದ್ದು, ಎಲ್ಲೆಡೆ ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Home add -Advt

ಸೋಮವಾರ ಹೋಳಿ ಹಬ್ಬವೂ ಇರುವುದರಿಂದ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಣ್ಣ ಆಡುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ನಿರ್ವಹಿಸಬೇಕಿದೆ. 

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ೧೦೪ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ೧೩೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ಮೀಟರ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಮಾರ್ಚ ೨೧ ರಿಂದ ಎಪ್ರಿಲ್ ೪ ರವರೆಗೆ (ಸಮಯ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨.೪೫ರವರೆಗೆ ಹಾಗೂ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫.೧೫ ಗಂಟೆಯವರೆಗೆ) ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ  ಮತ್ತು ಗ್ರುಪ್ ಗಳಿಗೆ  ಹಂಚಿರಿ)

Related Articles

Back to top button