Latest

ನಾಳೆ ಕೈಗಾರಿಕಾ ನೀತಿ ಕಾರ್ಯಾಗಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ, ಹೊನಗಾ ಸಣ್ಣ ಕೈಗಾರಿಕೆಗಳ ಸಂಘ ಮತ್ತು ಬೆಳಗಾವಿ ಫೌಂಡ್ರಿ ಕ್ಲಸ್ಟರ್‌ಗಳ ಸಹಯೋಗದಲ್ಲಿ ಮಾ.9 ರಂದು ಸಂಜೆ 4.30ಕ್ಕೆ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ಕೈಗಾರಿಕಾ ನೀತಿ 2014-16 ಹಾಗೂ ಉದ್ದೇಶಿತ ಹೊಸ ಕೈಗಾರಿಕಾ ನೀತಿ ಸಲಹೆಗಳ ಕುರಿತು ಕಾರ್ಯಾಗಾರ ಆಯೋಜಿಸಲಾಗಿದೆ.
ಶಾಸಕ ಅಭಯ ಪಾಟೀಲ ಉದ್ಘಾಟಿಸುವರು. ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ ಅಧ್ಯಕ್ಷತೆ ವಹಿಸುವರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ದೇಶನಾಲಯ(ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ) ಅಪರ ನಿರ್ದೇಶಕ ಎಚ್.ಎಂ. ಶ್ರೀನಿವಾಸ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್ ಜುವಳಿ, ಫೌಂಡ್ರಿ ಕ್ಲಸ್ಟರ್ ಅಧ್ಯಕ್ಷ ರಾಮ್ ಭಂಡಾರೆ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜು ಅತಿಥಿಗಳಾಗಿ ಭಾಗವಹಿಸುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button