ಪ್ರಗತಿವಾಹಿನಿ ಸುದ್ದಿ: ಕೊಡವರ ಸಂಸ್ಕೃತಿ ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ 5 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕುಟ್ಟದಿಂದ ಮಡಿಕೇರಿವರೆಗೆ ಆರಂಭ ಆಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ ಟಿ.ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆಗೆ ರಜೆ ಘೋಷಿಸಲಾಗಿದೆ
ಕೊಡವ ಆಡಳಿತ ಮಂಡಳಿಯಲ್ಲಿ ಇರುವ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಗಳ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ