ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ರಾಜ್ಯ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಅವರು ನೀಡಿರುವ ಹಲವು ತೀರ್ಪುಗಳು ಅದರಲ್ಲೂ ನಗರದ ಸ್ವಚ್ಛತೆ ಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನ ಸರ್ಕಾರಕ್ಕೆ ಮಾರ್ಗಸೂಚಿಯಂತಿತ್ತು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ವೃತ್ತಿ ಜೀವನಕ್ಕೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ದಿನೇಶ್ ಮಹೇಶ್ವರಿ ಅವರನ್ನು ಅವರ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಭೇಟಿ ಮಾಡಿ ಅಭಿನಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ