ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ
ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ಧ ಹಾಗೂ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಹಾಗೂ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟೇಶ ನಾಯಕ ಹೇಳಿದರು.
ಸ್ಥಳೀಯ ತಾಲೂಕು ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ, ನ್ಯಾಯವಾದಿಗಳ ಸಂಘ ಹಾಗೂ ಸರಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಅರಿತುಕೊಂಡಲ್ಲಿ ಶುಚಿಯಾದ ಆರೋಗ್ಯಕರ ಪರಿಸರ ನಿರ್ಮಾಣವಾಗುತ್ತದೆ ಎಂದರು.
ನ್ಯಾಯಾಧೀಶೆ ಭಾಗಮ್ಮ ಮಾತನಾಡಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಬಡಾವಣೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕೆಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ