
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬಕ್ಕೆ ಮುನ್ನವೇ ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಬಿಡುಗಡೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ಹಬ್ಬದ ಸಂದರ್ಭದಲ್ಲಿ ರೈತರಿಗೆ ಸಿಹಿ ಸುದ್ದಿ ನೀಡಿದೆ.
ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆ ಪ್ರಕಾರ, ಪಿಎಂ ಕಿಸಾಅನ್ ಯೀಜನೆ ಹಣ ಬಿಡುಗಡೆ ದಿನಾಂಕ ನಿಗದಿಯಾಗಿದೆ. 9.34 ಕೋಟಿ ಅರ್ಹ ರೈತರಿಗೆ ತಲಾ 2,000 ರೂ ಅನ್ನು ನೇರವಾಗಿ ಬ್ಯಾಂಕ್ ಅಕೌಂಟ್ಗೆ ವರ್ಗಾವಣೆ ಮಾಡಲಿದೆ.
ಸರ್ಕಾರ ಒಟ್ಟು 18,700 ಕೋಟಿ ರೂ ಹಣವನ್ನು ರೈತರಿಗೆ ನೀಡುತ್ತಿದೆ. ಅಕ್ಟೋಬರ್ 30, ಅಂದರೆ ನಾಳೆ ಶುಕ್ರವಾರವೇ ಹಣ ಬಿಡುಗಡೆ ಆಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




