ಪ್ರಗತಿವಾಹಿನಿ ಸುದ್ದಿ, ಸುವರ್ಣವಿಧಾನಸೌಧ, ಬೆಳಗಾವಿ
ರಾಜ್ಯದಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್ಗಳ ಪುನಶ್ಚೇತನಕ್ಕೆ ಕ್ರಮ ವಹಿಸುವುದಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ನಿಯಮ 69ರ ಮೇರೆಗೆ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪಕಾಲಾವಧಿ ಚರ್ಚೆಯಲ್ಲಿ ಶಾಸಕ ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ ಹಾಗೂ ಎಸ್. ಕುಮಾರಬಂಗಾರಪ್ಪ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ ಅವರು, ರಾಜ್ಯದಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್ಗಳಿಗೆ ಸಾಲಗಳ ಮರುಹೊಂದಾಣಿಕೆ ಮಾಡುವ ಮೂಲಕ ಪುನಶ್ಚೇತನಕ್ಕೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಪ್ರಸ್ತುತ ಕೃಷಿ ಸಾಲ ಮನ್ನಾ ಯೋಜನೆ ಅಡಿ ಭೂ ಅಭಿವೃದ್ಧಿ ಬ್ಯಾಂಕ್ಗಳ ಸಾಲ ಮನ್ನಾ ಮಾಡುವ ಸಂಬಂಧ ಮುಖ್ಯಮಂತ್ರಿಯವರಿಗೆ ಕಡತವನ್ನು ರವಾನಿಸಲಾಗಿದೆ. ಮುಖ್ಯಮಂತ್ರಿಗಳು ಈ ಕುರಿತು ಸದನದಲ್ಲಿ ವಿವರವಾಗಿ ಪ್ರತಿಕ್ರಿಯಿಸಲಿದ್ದಾರೆ ಎಂದರು.
ವಿಷಯ ಪ್ರಸ್ತಾಪಿಸಿದ್ದ ಶಾಸಕರಾದ ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ ಅವರು ರೈತರ ಕ್ಷೇಮಾಭಿವೃದ್ಧಿಗಾಗಿ ಹುಟ್ಟಿದ ಪಿಎಲ್ಡಿ ಬ್ಯಾಂಕುಗಳಲ್ಲಿ ಸಾಲಾ ಮಾಡಿರುವ ರೈತರು ಮನ್ನಾ ಆಗುವ ನೀರಿಕ್ಷೆಯಲ್ಲಿರುವುದರಿಂದ ಈ ಸಾಲಗಳ ಮೇಲಿನ ಬಡ್ಡಿ, ಸುಸ್ತಿಬಡ್ಡಿಯನ್ನು ಮನ್ನಾ ಮಾಡುವಂತೆ ಸರ್ಕಾರದ ಗಮನ ಸೆಳೆದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ