ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಪೆಟ್ರೊಲ್, ಡಿಸೆಲ್ ಬೆಲೆಯಲ್ಲಿ ಶನಿವಾರ ಮತ್ತಷ್ಟು ಇಳಿಕೆಯಾಗಿದ್ದು, ಪೆಟ್ರೋಲ್ 69.26 ರೂ. ಮತ್ತು ಡಿಸೆಲ್ 63.32 ಪೈಸೆಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದು, ಕಳೆದ ತ್ರೈಮಾಸಿಕದಲ್ಲಿ ಶೇ 40ರಷ್ಟು ಇಳಿಕೆಯಾಗಿದೆ. ಹಾಗಾಗಿ ಪೆಟ್ರೋಲ್, ಡಿಸೇಲ್ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.
90 ರೂ. ಹತ್ತಿರ ಹೋಗಿದ್ದ ಪೆಟ್ರೋಲ್ ಬೆಲೆ ಶತಕ ಭಾರಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇದೀಗ ದರದಲ್ಲಿ ತೀವ್ರ ಕುಸಿತ ಉಂಟಾಗಿದ್ದು, ರೂಪಾಯಿ ಕೂಡ ಚೇತರಿಕೆ ಕಾಣುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ