Karnataka News

*ಡಿಸಿಎಂ ಹೆಸರು ಹೇಳಿ ಅಧಿಕಾರಿಗಳಿಗೆ ವಂಚನೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ವ್ಯಕ್ತಿಯೋರ್ವ ವಂಚಿಸುತ್ತಿದ್ದ ಘಟಎ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ತುಮಕೂರು ಮೂಲದ ರಘುನಾಥ್ ಎಂಬಾತನನ್ನು ಬಂಧಿಸಿದ್ದಾರೆ.

Home add -Advt

ಬಂಧಿತ ಆರೋಪಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರ ಆಸ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸುತ್ತಿದ್ದ.

ಕೆಲ ದಿನಗಳ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹೇಳಿಕೊಂಡು ಇಂಜಿನಿಯರ್ ಓರ್ವರಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ 2 ಲಕ್ಷ ರೂ ಬೇಡಿಕೆ ಇಟ್ಟಿದ್ದ. ವಂಚಕನ ಮಾತು ನಂಬಿದ ಇಂಜಿನಿಯರ್ 80 ಸಾವಿರ ಹಣ ಕೊಟ್ಟಿದ್ದಾರೆ. ಕೆಲ ದಿನಗಳಲ್ಲೇ ತಾವು ಮೋಸ ಹೊಗಿದ್ದು ಗೊತ್ತಾಗಿದೆ. ತಕ್ಷಣ ವಿಧಾನಸೌಧ ಠಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ.


Related Articles

Back to top button