Latest

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ರೈತರ ಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕೇಂದ್ರ ಸರಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಘೋಷಿಸಿರುವ ’ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN )’ ಎಂಬ ಯೋಜನೆಯಡಿಯಲ್ಲಿ ೨ ಹೆಕ್ಟೇರ್‌ಗಳವರೆಗೆ (೫ ಎಕರೆ) ಕೃಷಿ ಭೂಮಿಯನ್ನು ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ೩ ಸಮಾನ ಕಂತುಗಳಲ್ಲಿ ವಾರ್ಷಿಕ ಒಟ್ಟು ೬ ಸಾವಿರ ರೂ.ಗಳನ್ನು ನೀಡಲು ಉದ್ದೇಶಿಸಲಾಗಿದೆ. ಮೊದಲನೇ ಹಂತದಲ್ಲಿ ಅರ್ಹವಾಗಬಹುದಾದ ಸಣ್ಣ ಮತ್ತು ಅತಿ ಸಣ್ಣ ರೈತರ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗುವುದು.
ರೈತರ ಪಟ್ಟಿಯಲ್ಲಿ ಸೇಪಡೆಗೊಂಡಿರುವ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಅಥವಾ ಅಟಲಜಿ ಜನ ಸ್ನೇಹಿ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ  PM-KISAN  ಯೋಜನೆಯ ಮಾರ್ಗಸೂಚಿ ಪ್ರಕಾರ ಅನುಬಂಧ-ಸಿ ಯಲ್ಲಿ ಸ್ವಯಂ ಘೋಷಣೆ ಪತ್ರವನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button