
ಪ್ರಗತಿವಾಹಿನಿ ಸುದ್ದಿ, ಹಿರೇಬಾಗೇವಾಡಿ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈರಣ್ಣ ಗೋಪಾಲ ಸಾಲಿಮನಿ (24) ಮತ್ತು ಶ್ವೇತಾ (21) ಆತ್ಮಹತ್ಯೆ ಮಾಡಿಕೊಂಡವರು.
ಒಂದೇ ನೇಣಿಗೆ ಪ್ರೇಮಿಗಳಿಬ್ಬರೂ ಶರಣಾಗಿದ್ದಾರೆ.
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಸ್ಥಳಕ್ಕೆ ಹಿರೇಬಾಗೇವಾಡಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




