
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಮದ್ದೂರಿನ ಕಲ್ಲು ತೂರಾಟ ಘಟನೆ ಮಾಸುವ ಮುನ್ನವೆ ದಾವಣಗೆರಯಲ್ಲೂ ಕಲ್ಲು ತೂರಾಟ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಪ್ಲೆಕ್ಸ್ ವಿಚಾರವಾಗಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲವರು ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಪ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಎರಡು ಕೋಮಿನವರ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆಸಲಾಗಿದೆ.
ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗಾಯಗೊಂಡ ಅನೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಧ್ಯ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.