ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆ.೨೮ ಮತ್ತು ಮಾ.೧ ರಂದು ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ವೀರವನಿತೆ ಬೆಳವಡಿ ಮಲ್ಲಮ್ಮ ಉತ್ಸವ ಆಯೋಜಿಸಲಾಗಿದೆ.
ಕೇಂದ್ರ ಸರಕಾರದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೈವಿಕ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಬೆಳವಡಿ ಸಂಸ್ಥಾನದ ರಾಜಗುರು ಶಿವಮಹಾಂತ ಶಿವಾಚಾರ್ಯ ಮಹಾಸ್ವಾಮಿಜಿ ಸಾನಿಧ್ಯ ವಹಿಸುವರು.
ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದು, ಬೃಹತ್ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಶಾಸಕಿ ಡಾ. ಅಂಜಲಿ ನಿಂಬಾಳಕರ ಹಾಗೂ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಉಪಸ್ಥಿತರಿರುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ