ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ರಾಜ್ಯದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಫೆ.೨೫ ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
೨೫ ರಂದು ಬೆಳಗ್ಗೆ ೯.೪೫ಕ್ಕೆ ಖಾನಾಪುರದಲ್ಲಿ ಸಾರ್ವಜನಿಕರಿಗೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ೧೧ಕ್ಕೆ ನಂದಗಡದ ರೂರಲ್ ಎಜುಕೇಶನ್ ಸೊಸೈಟಿ ಆವರಣದಲ್ಲಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಏರ್ಪಡಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಜಿಯಂ (ವೀರಭೂಮಿ) ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ ೩ಕ್ಕೆ ಬೆಳಗಾವಿಯಿಂದ ವಿಮಾನದ ಮೂಲಕ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.