ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನಗರದ ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ವತಿಯಿಂದ ಪಿಎಂಕೆವಿವೈ ಯೋಜನೆಯಡಿ ಆರ್‌ಪಿಎಲ್ ಸ್ಕೀಂ ಪ್ರಮಾಣ ಪತ್ರ ವಿತರಣಾ ಸಮಾರಂಭವು ಫೆ.9 ರಂದು ಬೆಳಗ್ಗೆ 9.30ಕ್ಕೆ ಶಹಾಪುರದ ದೈವಜ್ಞ ಬ್ರಾಹ್ಮಣ ಮಂಗಲ ಕಾರ್ಯಾಲಯದಲ್ಲಿ ನಡೆಯಲಿದೆ.
ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಧ್ಯಕ್ಷತೆ ವಹಿಸಲಿದ್ದು, ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ರಾಜ್ಯ ಅಧ್ಯಕ್ಷ ರಾಮರಾವ್ ರಾಯ್ಕರ್, ಸಂಸದ ಸುರೇಶ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ಅಧ್ಯಕ್ಷ ವೈಭವ ವೇರ್ಣೆಕರ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ