Belagavi NewsBelgaum NewsKannada NewsKarnataka NewsPolitics

*ಕೆಡಿಪಿ ಸಭೆಗೆ ಹೆಲಿಕಾಪ್ಟರ್ ಮೂಲಕ ಎಂಟ್ರಿಕೊಟ್ಟ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುವರ್ಣಸೌಧದಲ್ಲಿ ಇಂದು ನಡೆಯಲಿರುವ ಕೆಡಿಪಿ ಸಭೆಗೆ ಹಾಜರಾಗಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದರು.

ಗೋಕಾಕದಿಂದ  ಬೆಳಗಾವಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರ ಜೊತೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಸಚಿವರ ಆಪ್ತ ಸಹಾಯಕ ಬಸವರಾಜ ಜತ್ತಿ ಇದ್ದರು. ಹೆಲಿಕಾಪ್ಟರ್ ಮೂಲಕ ಸುವರ್ಣಸೌಧಕ್ಕೆ ಬಂದಿಳಿದ ಸಚಿವರಿಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕಂ,ಜಿಪಂ ಸಿಇಒ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್‌ ಕೆ. ಸೇರಿದಂತೆ ಹಿರಿಯ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ  ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಶಾಸಕ ಆಸಿಫ್ ಸೇಠ್, ವಿಶ್ವಾಸ ವೈಧ್ಯ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button