Belagavi NewsBelgaum NewsElection NewsKannada NewsKarnataka News

ಬೆಳಗಾವಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.26 ಲಕ್ಷ ರೂ. ವಶಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚುನಾವಣೆ ನಿಮಿತ್ತ ಹಾಕಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ.‌

ದಾಖಲೆಗಳಿಲ್ಲದೆ ಬೆಳಗಾವಿಯ ಕಣಬರ್ಗಿ ಬಳಿ ಇರುವ ಚಕ್ ಪೋಸ್ಟ್ ಮುಖಾಂತರ ಗೋಕಾಕನಿಂದ ಬೆಳಗಾವಿಗೆ ಕಾರಿನಲ್ಲಿ ಸಾಗುಸುತ್ತಿದ್ದ 5,26,500 ರೂ. ನಗದು ಹಣವನ್ನು ಸೀಜ್ ಮಾಡಲಾಗಿದೆ. 

ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರತರಾಗಿದ್ದ  ತನಿಖಾ ತಂಡದ ಮುಖ್ಯಸ್ಥರಾದ ಹರ್ಷವರ್ಧನ ಅಗಸರ್ ಮತ್ತು ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಅವರು ಹಣ ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸೂಕ್ತ ದಾಖಲೆಗಳನ್ನು ನೀಡಿ ಹಣವನ್ನು ಪಡೆದುಕೊಳ್ಳಬಹುದು. ಇಲ್ಲವಾದರೆ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button