Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರ್ನಾಟಕಾದ್ಯಂತ ಮಳೆ ಚುರುಕಾಗಿದೆ. ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ , ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಮೈಸೂರು, ಬಾಗಲಕೋಟೆ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ.


Related Articles

Back to top button