Latest
ಬಸವೇಶ್ವರ ಬ್ಯಾಂಕ್ ನಿರ್ದೇಶಕಿಯಾಗಿ ದೀಪಾ ಕುಡಚಿ ಆಯ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕಿನ ಮಹಿಳಾ ನಿರ್ದೇಶಕಿಯಾಗಿ ದೀಪಾ ಕುಡಚಿ ಅವರನ್ನು ನೇಮಿಸಲಾಗಿದೆ. ವಿದ್ಯಾ ಪಾಟೀಲ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ದೀಪಾ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ಬ್ಯಾಂಕಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




