Latest

ಉಮೇಶ್ ಕತ್ತಿ ಪಕ್ಷ ಬಿಡಲ್ಲ: ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಾಸಕ ಉಮೇಶ್ ಕತ್ತಿ ನನ್ನ ಸ್ನೇಹಿತ. ಆತ ಏನೇನೋ ಆಡ್ತಾನೆ, ಆದ್ರೆ ಪಕ್ಷ ಬಿಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಉಮೇಶ್ ಕತ್ತಿ ಮನೆಯಲ್ಲಿ ರೆಬಲ್ ನಾಯಕರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ,ಕೊರೊನಾ ಲಾಕ್‍ಡೌನ್ ಕಾರಣದಿಂದ ಯಾರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಹಳ ದಿನಗಳ ನಂತರ ಎಲ್ಲರೂ ಒಂದೆಡೆ ಕೂಡಿದ್ದಾರೆ ಅಷ್ಟೇ ಎಂದರು.

ಒಂದು ಕಡೆ ಕುಳಿತು ಊಟ ಮಾಡಿದ ಮಾತ್ರಕ್ಕೆ ಬಿಜೆಪಿ ಕೆಲ ನಾಯಕರು ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದಾರೆ ಎಂದು ಅದನ್ನೇ ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿವೆ. ಸಭೆ ಸೇರಿದ ಮಾತ್ರಕ್ಕೆ ಏನೇನೋ ಆಗಿ ಬಿಡುವುದಿಲ್ಲ ಎಂದು ಹೇಳಿದರು.

Home add -Advt

Related Articles

Back to top button