Belagavi NewsBelgaum NewsKannada NewsKarnataka NewsLatest

*ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ 3-4ದಿನಗಳ ಕಾಲ ಉತ್ತಮ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು ಜುಲೈ 11 ರವರೆಗೂ ಮಳೆ ಅಬ್ಬರಿಸಲಿದೆ.

ಜುಲೈ 8 ಹಾಗೂ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ,ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಬಳ್ಳಾರಿ, ಬೆಂಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ ಸೇರಿ ಇತರ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮೈಸೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Related Articles

Back to top button