ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ‌್ಯಾಲಿ ನಡೆಸಿದರು.ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ‌್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ