Latest

ಕ್ವಾರಂಟೈನ್ ಕೇಂದ್ರದ ಅಡುಗೆ ಕೆಲಸದವರ ಮೇಲೆ ಹಲ್ಲೆ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕ್ವಾರಂಟೈನ್ ಕೇಂದ್ರದಲ್ಲಿ ಅಡುಗೆ ಕೆಲಸದವರ ಮೇಲೆ ಮೇಲೆ ಹೊರ ರಾಜ್ಯದಿಂದ ಬಂದು ಕ್ವಾರಂಟೈನ್ ಆದ ಪುಂಡರು ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಇಲ್ಲಿನ ಸಿಂದಗಿಪಟ್ಟಣದ ಸರ್ಕಾರಿ ಶಾಲೆ, ವಸತಿ ನಿಲಯದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಕೆಲಸ ಮಾಡುತ್ತಿದ್ದ ಮೈಬೂಬಸಾಬ ಬನ್ನೆಟ್ಟಿ(60) ಅವರ ಮೇಲೆ ಯುವಕರಾದ ದೇವರನಾವದಗಿಯ ಅರುಣ ರಾಠೋಡ್ ಹಾಗೂ ರಾಹುಲ್ ರಾಠೋಡ್ ಹಲ್ಲೆ ನಡೆಸಿದ್ದಾರೆ.

Home add -Advt

ಕೊರೊನಾ ವೈರಸ್ ಹಿನ್ನೆಲೆ ಹೊರ ರಾಜ್ಯದಿಂದ ಬಂದಿದ್ದ ಕೂಲಿ ಕಾರ್ಮಿಕರನ್ನು ಸಂಸ್ಥಾ ಕ್ವಾರಂಟೈನ್‍ನಲ್ಲಿ ಇಡಲಾಗಿತ್ತು. ಈ ವೇಳೆ ಊಟಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವಂತೆ ಅಡುಗೆಯವರು ಸೂಚಿಸಿದ್ದಾರೆ. ಇದಕ್ಕೆ ರಿಚ್ಚಿಗೆದ್ದ ಯುವಕರು ಊಟ ಕೊಡುವುದನ್ನು ಬಿಟ್ಟು ನಮಗೇ ಸರತಿ ಸಾಲಿನಲ್ಲಿ ನಿಲ್ಲಲು ಹೇಳುತ್ತೀಯಾ ಎಂದು ಸಿಮೆಂಟ್ ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ.

ಗಾಯಗೊಂಡಿರುವ ಮೈಬೂಬ ಸಾಬರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Related Articles

Back to top button