ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಏಳು ಲೋಕಸಭಾ ಕ್ಷೇತ್ರಗಳ (ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು) ಶಕ್ತಿ ಕೇಂದ್ರ ಪ್ರಮುಖರ ಕಾರ್ಯಾಗಾರ ವನ್ನು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಕಿರಣ್ ಮಹೇಶ್ವರಿ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಅರವಿಂದ ಲಿಂಬಾವಳಿ , ಎನ್.ರವಿಕುಮಾರ್, ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ ಹಾಗೂ ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.