ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್, ಸರ್ವೆಲನ್ಸ ಟೀಮ್ ಮತ್ತು ಅಬಕಾರಿ ವಿಚಕ್ಷಣಾ ದಳಗಳು ತೃಪ್ತಿಕರವಾಗಿ ಕೆಲಸ ಮಾಡುತ್ತಿಲ್ಲ ಎಂದು ಚುನಾವಣೆ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್ ಅವರನ್ನು ಬೆಂಗಳೂರು ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಮಖ್ಯ ಚುನಾವಣಾ ಆಯುಕ್ತ ಸಂಜೀವ ಕುಮಾರ ಈ ನೇಮಕ ಮಾಡಿದ್ದು, ಹಣ ಮತ್ತು ಲಿಕ್ಕರ್ ಸಾಗಾಣಿಕೆ ತಡೆಯುವಲ್ಲಿ ವಿಶೇಷ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಈ ಸಂಬಂಧದ ಸಾಪ್ಟವೇರ್ ನ್ನು ಇನ್ನಷ್ಟು ಅಭಿವೃದ್ಧಿಪಡಿಸುವಂತೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ