Latest

ಬೆಂಕಿ ಹಚ್ಚಿ ಹೆಂಡತಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಸೀಮೆ ಎಣ್ಣೆ ಹಾಕಿ, ಬೆಂಕಿ ಹಚ್ಚಿ ಹೆಂಡತಿಯನ್ನು ಕೊಂದಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಬಾಳಪ್ಪ ಹುಕ್ಕೇರಿ ಜೀವಾವಧಿ ಶಿಕ್ಷೆಗೆ ಒಳಗಾದಾತ. ಸಾರಾಯಿ ಕುಡಿದು ಹೆಂಡತಿಗೆ ಹೊಡೆಯುತ್ತಿದ್ದ ಈತನಿಗೆ ಕುಡಿಯಲು ಹಣ ಕೊಡದಂತೆ ಗ್ರಾಮಸ್ಥರಿಗೆ ಹೇಳಿದ್ದೇ ಆತ ಹೆಂಡತಿಗೆ ಬೆಂಕಿ ಹಚ್ಚಲು ಕಾರಣ.
2016ರ ಏಪ್ರಿಲ್ ನಲ್ಲಿ ಈ ಘಟನೆ ನಡೆದಿದ್ದು ಮುರಗೋಡ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಭಾವತಿ ಜಿ. ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಮುರಳೀಧರ ಕುಲಕರ್ಣಿ ವಾದಿಸಿದ್ದರು.

Related Articles

Back to top button