ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬಹುಭಾಷಾ ನಟ ಪ್ರಕಾಶ ರೈ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರಂತೆ.
ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ರೈ, ಯಾವ ಕ್ಷೇತ್ರ ಎನ್ನುವುದನ್ನು ಶೀಘ್ರ ಬಹಿರಂಗಪಡಿಸುವುದಾಗಿ ಹೇಳಿದ್ದರು. ಇದೀಗ ಬೆಂಗಳೂರು ಸೆಂಟ್ರಲ್ ನಿಂದ್ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಇನ್ನಷ್ಟ ವಿವರಗಳನ್ನು ಶೀಘ್ರವೇ ಮಾಧ್ಯಮಗಳಿಗೆ ನೀಡುವುದಾಗಿ ಪ್ರಕಾಶ ರೈ ಹೇಳಿದ್ದಾರೆ.
ಚುನಾವಣೆ ಕಣಕ್ಕಿಳಿಯುವುದಾಗಿ ಪ್ರಕಾಶ ರೈ ಪ್ರಕಟಿಸುತ್ತಿದ್ದಂತೆ ಪರ ವಿರೋಧ ಭಾರೀ ಪ್ರತಿಕ್ರಿಯೆಗಳು ಬಂದಿದ್ದವು. ಕೆಲವರು ಸ್ವಾಗತಿಸಿದ್ದರೆ, ಇನ್ನು ಕೆಲವರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಇನ್ನೇನು ವಿವರ ಬಹಿರಂಗ ಪಡಿಸಲಿದ್ದಾರೆ ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ