Latest

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ: ತಾಂತ್ರಿಕ ಅಂಶ ಚರ್ಚಿಸಲು ಸಿಎಂ ಸೂಚನೆ

 
   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬೆಂಗಳೂರು ನಗದಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರಸ್ಥಾಪಿತ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಜರುಗಿತು.
ರೈಲ್ವೆ ಇಲಾಖೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ  ಮುಖ್ಯ ಮಂತ್ರಿಗಳು, ಸಬ್ ಅರ್ಬನ್ ರೈಲ್ವೆ ಮತ್ತು ಮೆಟ್ರೋ ಓವರ್ ಲ್ಯಾಪ್ ಆಗುವ ಪ್ರದೇಶಗಳಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಹಾಗೂ ಬಿ.ಎಂ.ಆರ್.ಸಿ.ಎಲ್  ಮತ್ತೊಂದು ಸುತ್ತಿನ ತಾಂತ್ರಿಕ ಚರ್ಚೆ ನಡೆಸುವಂತೆ  ಸೂಚಿಸಿದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ, ನಗರ ಭೂ ಸಾರಿಗೆ ಇಲಾಖೆ ನಿರ್ದೇಶಕ ದರ್ಪಣ್ ಜೈನ್ ಮತ್ತಿತರರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button