Latest

ಬೆಳಗಾವಿಯಲ್ಲಿ ಮಂಗಳವಾರ ಶಾಲೆ, ಕಾಲೇಜಿಗೆ ರಜೆ ಘೋಷಣೆ: ಡಿಸಿ ಆದೇಶ

   

ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಭಾರತ ಬಂದ್ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಭಾನುವಾರ ಶಾಲೆ ನಡೆಸುವ ಮೂಲಕ ರಜೆಯನ್ನು ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಿಗೆ ರಜೆ ಘೋಷಿಸಲಾಗಿದೆ. 

ಬಂದ್ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅನಾನುಕೂಲವಾಗುವ ಸಾಧ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ.  13ರಂದು, ಭಾನುವಾರ ಪೂರ್ಣ ದಿನ ಶಾಲೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button