ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಕಾಂತ ಸಿದ್ನಾಳ್ ಅಥವಾ ಅಶೋಕ ಪಟ್ಟಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇಂದು ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಈ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಾಜಿ ಶಾಸಕರಾದ ಫಿರೋಜ್ ಸೇಠ್, ವೀರಕುಮಾರ ಪಾಟೀಲ, ಎ.ಬಿ.ಪಾಟೀಲ. ಕಾಕಾ ಪಾಟೀಲ ಮೊದಲಾದವರು ಸಭೆಯಲ್ಲಿದ್ದರು.