ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಕಾರ್ಮಿಕ ಸಂಘಟನೆಗಳ ಬಂದ್ ಕರೆ ಹಿನ್ನೆಲೆಯಲ್ಲಿ ಮಕ್ಕಳ ಮತ್ತು ಶಿಕ್ಷಕರ ಸುರಕ್ಷತೆ ಕಾರಣದಿಂದ ಮೊದಲ ದಿನ ಜಿಲ್ಲೆಯ ಎಲ್ಲ ಶಾಲೆ, ಕಾಲೇಜಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ, ಶೈಕ್ಷಣಿಕ ಹಿತದೃಷ್ಟಿ ಕಾರಣದಿಂದ ಎರಡನೇ ದಿನವಾದ ಬುಧವಾರ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ, ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಬುಧವಾರ ಸಹಜವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ