Latest

*ಸಿದ್ದರಾಮಯ್ಯ ಬೆನ್ನಲ್ಲೇ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ 10 ಜನಪಥ್ ನಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಬೆಳಿಗ್ಗೆ ಸಿದ್ದರಾಮಯ್ಯ ಆಗಮಿಸಿ, ರಾಹುಲ್ ಗಾಂಧಿಯವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ವಾಪಸ್ ಆಗಿದ್ದರು. ಸಿದ್ದರಾಮಯ್ಯ ಬಳಿಕ ಇದೀಗ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Home add -Advt

ನೂತನ ಸಿಎಂ ಆಯ್ಕೆ ವಿಚಾರವಾಗಿ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇಬ್ಬರು ನಾಯಕರೊಂದಿಗೆ ಚರ್ಚೆ ನಂತರ ರಾಹುಲ್ ಗಾಂಧಿಯವರೇ ನೂತನ ಸಿಎಂ ಹೆಸರು ಘೋಷಣೆ ಮಾಡುವ ನಿರೀಕ್ಷೆ ಇದೆ.

https://pragati.taskdun.com/rahul-gandhisiddaramaiahmeet/


Related Articles

Back to top button