ಪ್ರಗತಿವಾಹಿನಿ ಸುದ್ದಿ, ಅಗಸಗಿ (ಬೆಳಗಾವಿ)
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬಳ್ಳು ಸಾವಿಗೀಡಾಗಿದ್ದಾಳೆ.
ಯಮುನಾಪುರ ಹತ್ತಿರ ಕೊಲ್ಹಾಪುರ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಪ್ಟ್ ಕಾರು ಹಿಂದಿನಿಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರನ ಪತ್ನಿ ಸ್ಥಳದಲ್ಲೆ ಮೃತಪಟ್ಟಿದ್ದಾಳೆ.
ಮೃತಳ ಹೆಸರು ರೇಣುಕಾ ಎಂದು ತಿಳಿದು ಬಂದಿದ್ದು, ಪತಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿ ಎನ್ನಲಾಗಿದೆ. ಪತ್ನಿ ಮತ್ತು 2 ವರ್ಷದ ಮಗನ ಜೊತೆ ಸ್ವಂತ ಊರಾದ ರಾಯಬಾಗಕ್ಕೆ ಹೊರಟಿದ್ದರು ಎಂದು ಗೊತ್ತಾಗಿದೆ.
ಇದೇ ಕಾರು ಇನ್ನೊಂದು ಬೈಕ್ಗೆ ಸಹ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಕಾರು ಚಾಲಕ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ .
ಬೆಳಗಾವಿ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ