ಪ್ರಗತಿವಾಹಿನಿ ಸುದ್ದಿ, ಮೈಸೂರು
ನಂಜನಗೂಡಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ನೈಟ್ರೋಜನ್ ಬಲೂನ್ ಸ್ಫೋಟಿಸಿದ ಪರಿಣಾಮ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.
ಜಾತ್ರೆಯಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಇದ್ದಕ್ಕಿದ್ದಂತೆ ಕ್ರೀಡಾ ಜ್ಯೋತಿಯ ಬೆಂಕಿ ತಗುಲಿ ನೈಟ್ರೋಜನ್ ಬಲೂನ್ ಸ್ಫೋಟಿಸಿದೆ. ಸ್ಥಳದಲ್ಲೇ ಇದ್ದ ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರಿತಿಬ್ಬೇಗೌಡ, ಶಿವಕುಮಾರ್, ದೇವಣ್ಣ ಎಂಬುವವರಿಗೆ ಸಹ ಸಣ್ಣ ಗಾಯಗಳಾಗಿವೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ