Politics

*ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಮುನಿರತ್ನ ಮೆರವಣಿಗೆಯಲ್ಲಿ ಹೆಜ್ಜೆಹಾಕಿ ತೆರಳುತ್ತಿದ್ದ ವೇಳೆ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ನೇರವಾಗಿ ಮುನಿರತ್ನ ಅವರ ತಲೆಯ ಮೇಲೆ ಮೊಟ್ಟೆ ಅಪ್ಪಳಿಸಿದೆ. ತಕ್ಷಣ ಪೊಲೀಸರು ಹಾಗೂ ಮುನಿರತ್ನ ಬೆಂಬಲಿಗರು ಮುನಿರತ್ನರನ್ನು ರಕ್ಷಿಸಿದ್ದಾರೆ. ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದೇ ವೇಳೆ ಮುನಿರತ್ನ ಕಾರಿನ ಮೇಲೆ ಕಲ್ಲು ತೂರಾಟವೂ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರರೇ ಈ ಕೃತ್ಯವೆಸಗಿದ್ದಾರೆ ಎಂದು ಮುನಿರತ್ನ ಹಾಗೂ ಬೆಂಬಲಿಗರು ಆರೋಪಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆಂದು ಮುನಿರತ್ನ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Home add -Advt

Related Articles

Back to top button