ಪ್ರಗತಿವಾಹಿನಿ ಸುದ್ದಿ: ಹರಿಯಾಣದ ಅಂಬಾಲಾ ಬಳಿ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಘಾತದಲ್ಲಿ 7 ಜನ ಸ್ಥಳದಲ್ಲೇ ಸಾವಿಗಿಡಾಗಿರುವ ಘಟನೆ ನಡೆದಿದೆ.
ಈ ಅಪಘಾತದಲ್ಲಿ 7 ಜನ ಮೃತಪಟ್ಟರೆ, 25 ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವಾರವಷ್ಟೇ, ಹರಿಯಾಣಾದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದು, 15 ಮಂದಿ ಗಾಯಗೊಂಡಿದ್ದರು. ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್ನ ಹೋಶಿಯಾರ್ಪುರ ಮತ್ತು ಲುಧಿಯಾನ ನಿವಾಸಿಗಳು. ಇವರೆಲ್ಲರೂ ಮಥುರಾ ಮತ್ತು ವೃಂದಾವನದಿಂದ ಧಾರ್ಮಿಕ ತೀರ್ಥಯಾತ್ರೆಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಸದ್ಯ ಗಾಯಗೊಂಡವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟೂರಿಸ್ಟ್ ಬಸ್ಗೆ ಬೆಂಕಿ ಹತ್ತಿಕೊಂಡು 9 ಜನ ಸಹಜೀವ ಸಹನ ಆಗಿರುವ ಘಟನೆ ಮರೆಮಾಚುವ ಮುನ್ನವೇ ಮತ್ತೆ ಗುರುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ 7 ಜನ ಸಾವನ್ನಪ್ಪಿದ್ದು, ಆ ರಸ್ತೆಯ ಮೇಲೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಯದ ವಾತಾವರಣ ಸೃಷ್ಠಿಸಿದೆ. ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ