Latest

ಮಂಗಳವಾರ ಘಟಪ್ರಭಾ ರೈಲ್ವೆ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

  

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಘಟಪ್ರಭಾ ರೈಲ್ವೆ ನಿಲ್ದಾಣದ ನೂತನ ಕಟ್ಟಡ ಮತ್ತು ಪಾದಚಾರಿ ಮೇಲ್ಸೆತುವೆ ಕಾಮಗಾರಿಗೆ ಸಂಸದ ಸುರೇಶ ಅಂಗಡಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸುವರು.

ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

Home add -Advt

 

Related Articles

Back to top button