ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಏ.23 ರಂದು ಮತದಾನ ಹಾಗೂ ಮೇ 23 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿರುವುದರ ನಿಮಿತ್ತ ಬೆಳಗಾವಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏ.21 ರ ಸಂಜೆ 6 ಗಂಟೆಯಿಂದ ಏ.23 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮೇ 22 ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಶಾಲ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ