Latest

*ಮತ್ತೊಂದು ಭೀಕರ ಅಪಘಾತ*: *ಹಸುಗೂಸು ಸೇರಿದಂತೆ 7 ಜನರು ಸ್ಥಳದಲ್ಲೇ ಸಾವು*

ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಹಸುಗೂಸು ಸೇರಿದಂತೆ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಎರಡು ತುಂಡಾಗಿದೆ. ಶನಿವಾರ (ನವೆಂಬರ್ 21) ರಾತ್ರಿ ಸುಮಾರು 9.30ರ ವೇಳೆಗೆ ಈ ದುರಂತ ಸಂಭವಿಸಿದೆ.

ಗುಜರಾತ್‌ನ ಕಛ್ ಜಿಲ್ಲೆಯ ಭುಜ್‌-ಖಾವ್ಡಾ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಉತ್ತರಾಖಂಡದಿಂದ ಕಛ್​ಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಸದಸ್ಯರು ಕಾರಿನಲ್ಲಿ ಭುಜ್ ಕಡೆಗೆ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಖಾವ್ಡಾ ಕಡೆಗೆ ತೆರಳುತ್ತಿದ್ದ ಸರಕು ಸಾಗಣೆ ಟ್ರೇಲರ್ ಟ್ರಕ್ ಎದುರಿನಿಂದ ಬಂದಿದೆ. ನಿರ್ಜನ ಪ್ರದೇಶದ ರಸ್ತೆಯಲ್ಲಿ ಎರಡೂ ವಾಹನಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಎರಡು ಭಾಗಗಳಾಗಿ ಸೀಳಿಹೋಗಿದೆ.

Related Articles

Back to top button