ಪ್ರಗತಿವಾಹಿನಿ ಸುದ್ದಿ, ಉಡುಪಿ
ಪಿಯುಸಿಯಲ್ಲಿ ಅನುತ್ತೀರ್ಣಳಾದ ಹೆಬ್ರಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪ್ರಜ್ಞಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಯಾಗಿದ್ದು, ಆಕೆ ಉಡುಪಿ ಜಿಲ್ಲೆಯ ಹೆಬ್ರಿಯ ನಡುಮನೆ ಗ್ರಾಮದವಳಾಗಿದ್ದಳು.
ಪ್ರಜ್ಞಾ ಬ್ರಹ್ಮಾವರ ಬೋರ್ಡ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಕನ್ನಡ ವಿಷಯದಲ್ಲಿ ಅನುತ್ತೀರ್ಣಳಾದ ಆಕೆ ಮನನೊಂದು ಸೀರೆಯಿಂದ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ