Latest

ಮರಳು ಮಾಫಿಯಾ: ಒಪ್ಪಿಕೊಂಡ ಪರಮೇಶ್ವರ

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮರಳು ಮಾಫಿಯಾ ಕೆಲಸ ಮಾಡುತ್ತಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಇದಕ್ಕೆ ಕಡಿವಾಣ ಹಾಕಲೂ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ವಿ ಬಳಿ ಗರಾಮಲೆಕ್ಕಾಧಿಕಾರಿ ಹತ್ಯೆ ವಿಷಯವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ. ರಾಜ್ಯದ ಬೇರೆ ಬೇರ ಕಡೆಗಳಲ್ಲೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದು ಗಮನದಲ್ಲಿದೆ. ಮರಳು ಮಾಫಿಯಾ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು. ಅಗತ್ಯವಾದರೆ ಕಾನೂನು ತಿದ್ದುಪಡಿ ತರಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button