ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ಸರ್ವೋಚ್ಛ ನ್ಯಾಯಾಲಯದಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.
ಮಹದಾಯಿ ನ್ಯಾಯಾಧಿಕರಣ ಆ.14ರಂದು ನೀಡಿರುವ ನೀರು ಹಂಚಿಕೆಯಿಂದ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಕರ್ನಾಟಕ ಸವ್ರೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಂಬಂಧ ಸುಪ್ರಿಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ ಎಂದು ನ್ಯಾಯವಾದಿ ಎಂ.ಬಿ.ಜಿರಲಿ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ