ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಎ.ಬಿ.ಮಾಲಕರಡ್ಡಿ ಬಿಜೆಪಿ ಸೇರಲಿದ್ದಾರೆ.
ಮಾ.22ರಂದು ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.
2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಯಾದಗಿರಿ ಕ್ಷೇತ್ರದ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆಗ ಸಚಿವ ಸ್ಥಾನ ಸಿಗಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಅವರು ಅಸಮಾಧಾನಗೊಂಡಿದ್ದರು.
ಖರ್ಗೆ ಬೆಂಬಲಿಗರಾಗಿದ್ದ ಮೂವರು ನಾಯಕರು ಈಗಾಗಲೇ ಬಿಜೆಪಿ ಸೇರಿದ್ದಾರೆ. ಡಾ.ಉಮೇಶ್ ಜಾಧವ್ ಅವರು ಖರ್ಗೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಲಿದ್ದು, ಮಾಲಕ ರೆಡ್ಡಿ ನಿರ್ಧಾರ ಖರ್ಗೆಗೆ ಮತ್ತಷ್ಟು ಹಿನ್ನಡೆಯಾಗಬಹುದು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರೊಂದಿಗೆ ಸೇರ್ ಮಾಡಿ)