ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಸವಪೀಠಾಧ್ಯಕ್ಷೆ ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ವಾಸಕೋಶದ ಸಮಸ್ಯೆ ಹಾಗೂ ಕಿಡ್ನಿ ತೊಂದರೆಯಿಂದ ಅವರು ಬಳಲುತ್ತಿದ್ದಾರೆ. ದಿನದಿಂದ ದಿನಕ್ಕೆ ಆರೋಗ್ಯ ಸಮಸ್ಯೆ ಗಂಭೀರವಾಗುತ್ತಿದೆ.